ಕದ್ರಿ: ಎಎಸ್ ಐ ಜಯರಾಮ ನಿಧನ
Update: 2020-02-11 23:22 IST
ಮಂಗಳೂರು: ಕದ್ರಿ ಸಂಚಾರ ಪೊಲೀಸ್ ಠಾಣೆಯ ಎಎಸ್ ಐ ಮೂಲತಃ ಸುಳ್ಯ ಜಟ್ಟಿಪಳ್ಳ ನಿವಾಸಿ ಜಯರಾಮ (54) ಅಸೌಖ್ಯದಿಂದ ಮಂಗಳವಾರ ನಿಧನರಾದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪಾಂಡೇಶ್ವರ, ಬಂದರು, ಕೊಣಾಜೆ ಮೊದಲಾದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.