ಫೆ.13ರಂದು ಶಾಲೆ-ಕಾಲೇಜುಗಳಿಗೆ ರಜೆ ಇಲ್ಲ: ಸಚಿವ ಸುರೇಶ್ ಕುಮಾರ್

Update: 2020-02-12 09:21 GMT

ಬೆಂಗಳೂರು, ಫೆ.12: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13ರಂದು (ಗುರುವಾರ) ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ ಕಾಲೇಜುಗಳಿಗೆ ಅಧಿಕೃತವಾಗಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಆದರೆ ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಆಯಾ ಜಿಲ್ಲಾಡಳಿತಗಳು ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News