ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2020-02-12 12:19 GMT

ಬೆಂಗಳೂರು, ಫೆ.12: ಶರವೇಗವಾಗಿ ಸಾಗುತ್ತಿದ್ದ ಬೈಕ್ ಸವಾರ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಇಲ್ಲಿನ ವಿವಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಂಕರಪುರದ ಸುಬ್ರಮಣ್ಯಪುರ ಬಡಾವಣೆಯ ಗಣೇಶ್(26) ಮೃತ ಬೈಕ್ ಸವಾರ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಂಪೆನಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಗಣೇಶ್, ಮಂಗಳವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ವೇಗವಾಗಿ ಹೋಗುತ್ತಿದ್ದಾಗ ಇಲ್ಲಿನ ಕ್ರಂಬಿಗಲ್ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಗಣೇಶ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News