×
Ad

‘ಋತು ಚಕ್ರದ ಶುಚಿತ್ವ ನಿರ್ವಹಣೆ’ ಕಿರುಚಿತ್ರ ಬಿಡುಗಡೆ

Update: 2020-02-12 20:53 IST

ಉಡುಪಿ, ಫೆ.12: ಉಡುಪಿ ಜಿಲ್ಲಾಪಂಚಾಯತ್‌ನಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು ಅವರು ‘ಋತುಚಕ್ರದ ಶುಚಿತ್ವ ನಿರ್ವಹಣೆ’ ಕುರಿತ ಕಿರುಚಿತ್ರ ಬಿಡುಗಡೆಗೊಳಿಸಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಋತು ಚಕ್ರದ ಶುಚಿತ್ವ ನಿರ್ವಹಣೆ ಅರಿವು ಕಾರ್ಯಕ್ರಮ ಒಂದು ಪ್ರಮುಖ ಅಂಶವಾಗಿದ್ದು, ಹದಿಹರೆಯದ ವಿದ್ಯಾರ್ಥಿನಿಯರಿಗೆ ಋತು ಚಕ್ರದ ಶುಚಿತ್ವ ನಿರ್ವಹಣೆ ಹಾಗೂ ಬಳಸಿದ ಸ್ಯಾನಿಟರಿ ಪ್ಯಾಡ್‌ಗಳ ಸುರಕ್ಷಿತ ವಿಲೇವಾರಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜು ಗಳಿಗೆ ರಾಜ್ಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರು ರಚಿಸಿದ ‘ಋತು ಚಕ್ರದ ಶುಚಿತ್ವ ನಿರ್ವಹಣೆ’ಗೆ ಸಂಬಂಧಿಸಿದ ಕಿರುಚಿತ್ರಗಳನ್ನು ಸಿಡಿಯಲ್ಲಿ ದಾಖಲಿಸಲಾಗಿದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಇವುಗಳನ್ನು ಶೀಘ್ರವೇ ವಿತರಿಸಲಾಗುವುದು.

ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜು ಗಳಿಗೆ ರಾಜ್ಯ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರು ರಚಿಸಿದ ‘ಋತು ಚಕ್ರದ ಶುಚಿತ್ವ ನಿರ್ವಹಣೆ’ಗೆ ಸಂಬಂಧಿಸಿದ ಕಿರುಚಿತ್ರಗಳನ್ನು ಸಿಡಿಯಲ್ಲಿ ದಾಖಲಿಸಲಾಗಿದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಇವುಗಳನ್ನು ಶೀಘ್ರವೇ ವಿತರಿಸಲಾಗುವುದು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಜಿಲ್ಲಾ ಪಂಚಾಯತ್ ಸದಸ್ಯರು, ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಉಪ ಕಾರ್ಯದರ್ಶಿ, ಮುಖ್ಯಯೋಜನಾಧಿಕಾರಿ, ಯೋಜನಾ ನಿರ್ದೇಶಕರು ಹಾಗೂ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News