ಜಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ರ್ಯಾಲಿ

Update: 2020-02-12 15:48 GMT
ಫೈಲ್ ಚಿತ್ರ

ಹೈದರಾಬಾದ್, ಫೆ. 12: ದಿಲ್ಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದರ ವಿರುದ್ಧ ಇಲ್ಲಿನ ಜನತೆ ಹಾಗೂ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

ಹೈದರಾಬಾದ್‌ನ ನಿಝಾಮಿಯಾ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಎಂಎಎನ್‌ಯುಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಮೆಹ್ದಿ ಪಟ್ಟಣಂನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಮಹಿಳೆಯರನ್ನು ಪೊಲೀಸರು ತಡೆದರು. ಸಂಸತ್ತಿನತ್ತ ರ್ಯಾಲಿ ನಡೆಸಿದ ಕಾರಣಕ್ಕೆ ದಿಲ್ಲಿ ಪೊಲೀಸರಿಂದ ಥಳಿತಕ್ಕೊಳಗಾದ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ ನಿಝಾಮಿಯಾ ಟಿಬ್ಬಿ ಕಾಲೇಜಿನ ಯನಾನಿ ಯುಜಿ ಹಾಗೂ ಪಿಜಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದರು. ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ದಿಲ್ಲಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News