ಕಲಬುರಗಿ: ಮೂರನೇ ದಿನಕ್ಕೆ ಕಾಲಿಟ್ಟ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಮಹಿಳೆಯರ ಪ್ರತಿಭಟನೆ

Update: 2020-02-12 16:23 GMT

ಕಲಬುರಗಿ, ಫೆ.12: ಜಿಲ್ಲೆಯ ಮಹೇಬೂಬ್ ನಗರ ಪ್ರದೇಶದಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್ ಪಿಆರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದಿನ ಹೋರಾಟದಲ್ಲಿ 100ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದರು. 

ಪ್ರತಿಭಟನೆಯಲ್ಲಿ ಸಂವಿಧಾನ ಕುರಿತು ಪ್ರಬಂಧ ಸ್ಪರ್ಧೆ ಮತ್ತು ರಸ್ತೆ ಬದಿಯಲ್ಲಿ ಪೋಸ್ಟರ್ ಪ್ರದರ್ಶಿಸಿ ಪೌರತ್ವ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಪ್ರತಿಭಟನೆಯಲ್ಲಿ ಮಾತನಾಡಿದ ರಾಬೀಯಾ ಬೇಗಂ, ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕಾಯ್ದೆ ಸಂವಿಧಾನ ವಿರೋಧಿ ಮತ್ತು ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿದೆ. ಯಾವುದೇ ಜಾತಿ, ಧರ್ಮ ಹಾಗೂ ಲಿಂಗದ ಆಧಾರದಲ್ಲಿ ತಾರತಮ್ಯ ಮಾಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ಆದರೆ ಕೇಂದ್ರದ ಮೋದಿ ಮತ್ತು ಅಮಿತ್ ಶಾ ಸರಕಾರ ಧರ್ಮದ ಆಧಾರದಲ್ಲಿ ಕಾನೂನು ತರುವ ಮೂಲಕ ತಾರತಮ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದರು. 

ಪ್ರತಿಭಟನೆಯಲ್ಲಿ ಕಲಬುರಗಿಯ ವಿವಿಧ ಬಡಾವಣೆಯ ಮಹಿಳೆಯರು, ಮಕ್ಕಳು ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News