ನಿಷೇಧಾಜ್ಞೆ ಜಾರಿ ಪ್ರಶ್ನಿಸಿ ಅರ್ಜಿ: ಹೈಕೋರ್ಟ್‌ನಲ್ಲಿ ರಾಮಲೀಲಾ ತೀರ್ಪು ಉಲ್ಲೇಖಿಸಿದ ಪ್ರೊ.ರವಿವರ್ಮ ಕುಮಾರ್

Update: 2020-02-12 16:44 GMT

ಬೆಂಗಳೂರು, ಫೆ.12: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರ ಪರ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ರಾಮಲೀಲಾ ಮೈದಾನ ತೀರ್ಪು ಸೇರಿ ಇತರೆ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡನೆ ಮಾಡಿದರು. 

ಈ ಕುರಿತು ರಾಜ್ಯಸಭಾ ಸದಸ್ಯ ರಾಜೀವ್‌ ಗೌಡ, ಶಾಸಕಿ ಸೌಮ್ಯರೆಡ್ಡಿ, ಪಿಯುಸಿಎಲ್ ಸೇರಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ವಾದ ಮಂಡನೆಗೆ ಸಮಯಾವಕಾಶ ಕೇಳಿದ್ದರಿಂದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಿತು. 

ಪೌರತ್ವ ಕಾಯ್ದೆಯನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಸಂವಿಧಾನದ ಅನುಚ್ಛೇದ 19(1), ಅನುಚ್ಛೇದ 14 ಮತ್ತು 21ರ ಅಡಿಯಲ್ಲಿ ಅವಕಾಶವಿದೆ. ಆದರೆ, ಪ್ರತಿಭಟನೆ ನಡೆಸಲು ವಿರೋಧ ವ್ಯಕ್ತಪಡಿಸಿ, ಸೆಕ್ಷನ್ 144 ಜಾರಿಗೊಳಿಸಿರುವುದನ್ನು ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿಯಲ್ಲಿ ರಾಜ್ಯ ಇಲಾಖೆ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News