ವಿರಾಟ್ ಕೊಹ್ಲಿ ನಂ.1 ; ಅಗ್ರಸ್ಥಾನ ಕಳೆದುಕೊಂಡ ಬುಮ್ರಾ

Update: 2020-02-12 17:19 GMT

ದುಬೈ, ಫೆ.12: ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.

ಕೊಹ್ಲಿ ಮಂಗಳವಾರ ಕೊನೆಗೊಂಡಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕೇವಲ 75 ರನ್ ಗಳಿಸಿದ್ದರು. ಭಾರತ ಸತತವಾಗಿ ಎಲ್ಲ 3 ಪಂದ್ಯಗಳಲ್ಲಿ ಸೋತಿತ್ತು. ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದಾಗಿ ನ್ಯೂಝಿಲ್ಯಾಂಡ್ ವಿರುದ್ಧ ಏಕದಿನ ಸರಣಿಯಿಂದ ವಂಚಿತರಾಗಿದ್ದರು. ನ್ಯೂಝಿಲ್ಯಾಂಡ್‌ನ ಹಿರಿಯ ಬ್ಯಾಟ್ಸ್‌ಮನ್ ರಾಸ್ ಟೇಲರ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಬೌಲರ್‌ಗಳ ಐಸಿಸಿ ರ್ಯಾಂಕಿಂಗ್‌ನಲ್ಲಿ ಬುಮ್ರಾ ನಂ.1 ಸ್ಥಾನ ಕಳೆದುಕೊಂಡಿದ್ದು, ನ್ಯೂಝಿಲ್ಯಾಂಡ್‌ನ ಟ್ರೆಂಟ್ ಬೌಲ್ಟ್ ಅಗ್ರಸ್ಥಾನಕ್ಕೇರಿದ್ದಾರೆ. ಬುಮ್ರಾ ಕಿವೀಸ್ ವಿರುದ್ಧ ಎಲ್ಲ ಮೂರು ಪಂದ್ಯಗಳಲ್ಲಿ ಆಡಿದ್ದರೂ ಪರಿಣಾಮಕಾರಿ ಪ್ರದರ್ಶನ ನೀಡಲು ವಿಫಲರಾಗಿದ್ದರು. 30 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಒಂದೂ ವಿಕೆಟ್ ಪಡೆದಿರಲಿಲ್ಲ.

ಬುಮ್ರಾ 2ನೇ ಸ್ಥಾನದಲ್ಲಿದ್ದರೆ, ಅಫ್ಘಾನಿ ಸ್ತಾನದ ಮುಜೀಬ್‌ವುರ್ರಹ್ಮಾನ್, ದ.ಆಫ್ರಿಕಾದ ಕಾಗಿಸೊ ರಬಾಡ ಹಾಗೂ ಪ್ಯಾಟ್ ಕಮಿನ್ಸ್ ಆ ಬಳಿಕದ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜ ಮೂರು ಸ್ಥಾನ ಮೇಲಕ್ಕೇರಿ ಏಳನೇ ಸ್ಥಾನ ತಲುಪಿದ್ದಾರೆ. ಜಡೇಜ 2 ಇನಿಂಗ್ಸ್ ಗಳಲ್ಲಿ 63 ರನ್ ಗಳಿಸಿದ್ದು, ಎರಡು ವಿಕೆಟ್‌ಗಳನ್ನು ಪಡೆದಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನದ ಮುಹಮ್ಮದ್ ನಬಿ ನಂ.1 ಸ್ಥಾನಕ್ಕೇರಿದ್ದಾರೆ. ಇತ್ತೀಚೆಗೆ ದ.ಆಫ್ರಿಕಾ ವಿರುದ್ಧ ಸರಣಿಯಿಂದ ಹೊರಗುಳಿದಿದ್ದ ಬೆನ್ ಸ್ಟೋಕ್ಸ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News