ಅನಂತರಾಜ ಉಪಾಧ್ಯಾಯರಿಗೆ ಸೇವಾಭೂಷಣ ಪ್ರಶಸ್ತಿ
Update: 2020-02-12 23:11 IST
ಉಡುಪಿ, ಫೆ.12: ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ದೀರ್ಘಕಾಲ ಸಂಸ್ಥೆಯ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ಸೇವಾಭೂಷಣ ಪ್ರಶಸ್ತಿಗೆ ಸಂಸ್ಥೆಯ ಸಕ್ರಿಯ ಕಾರ್ಯಕರ್ತ ಯು. ಅನಂತರಾಜ ಉಪಾಧ್ಯಾಯ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಫೆ.15ರ ಶನಿವಾರ ಸಂಜೆ 6:00 ಗಂಟೆಗೆ ರಥಬೀದಿಯಲ್ಲಿರುವ ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.