×
Ad

ಬಂಟ್ವಾಳ : ಅಕ್ರಮ ಮರಳುಗಾರಿಕೆಗೆ ದಾಳಿ

Update: 2020-02-12 23:41 IST

ಬಂಟ್ವಾಳ, ಫೆ.12: ತಾಲೂಕಿನ ಕರಿಯಂಗಳದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಬುಧವಾರ ದಾಳಿ ನಡೆಸಿದ ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಜಂಟಿ ತಂಡ ದೋಣಿ, ಲಾರಿ ಮತ್ತು ಹಿಟಾಚಿ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ಬಡಗಬೆಳ್ಳೂರಿನಲ್ಲಿ ಮರಳುಗಾರಿಕೆ ನಡೆಸಲು ವ್ಯಕ್ತಿಯೊಬ್ಬರಿಗೆ ಟೆಂಡರ್ ನೀಡಲಾಗಿದ್ದು ಆದರೆ ಆ ವ್ಯಕ್ತಿ ಕರಿಯಂಗಳದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ವೇಳೆ ಅಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದು ಒಟ್ಟು 11 ದೋಣಿಗಳು, 6  ಲಾರಿಗಳು ಹಾಗೂ ಒಂದು ಹಿಟಾಚಿ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಸೊತ್ತುಗಳನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯವರು ಪರಿಶೀಲಿಸಿ ಮುಂದಿನ  ಕ್ರಮ ಕೈಗೊಳ್ಳಲಿದ್ದಾರೆ ಎಂದು ತಹಶೀಲ್ದಾರ್ ರಶ್ಮಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News