ಫೆ. 28ರಿಂದ ಎಮ್ಮೆಮಾಡು ಮುಖಾಂ ಉರೂಸ್

Update: 2020-02-13 10:36 GMT

ಮಡಿಕೇರಿ  : ಭಾವೈಕ್ಯತೆಯ ಎಮ್ಮೆಮಾಡು ಕ್ಷೇತ್ರದಲ್ಲಿ ವಾರ್ಷಿಕ ಉರೂಸ್ ಕಾರ್ಯಕ್ರಮ ಫೆ.28 ರಿಂದ ಮಾ.6 ರವರೆಗೆ  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಉರೂಸ್ ಸಂದರ್ಭ ಸಾರ್ವಜನಿಕ ಸಮ್ಮೇಳನ, ಸಾಮೂಹಿಕ ವಿವಾಹ, ಮತಪ್ರವಚನ, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಉರೂಸ್ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭದಂದು ಧಾರ್ಮಿಕ ಪಂಡಿತರು, ಉಲಮಾಗಳು, ಉಮಾರಗಳು ಸೇರಿದಂತೆ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಾ. 2 ರಂದು ಸಾರ್ವಜನಿಕ ಸಮ್ಮೇಳನ ಮತ್ತು ಸಾಮೂಹಿಕ ಅನ್ನಸಂತರ್ಪಣೆಯಾಗಲಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಭಕ್ತರು ಜಾತಿ, ಮತ, ಭೇದ ಮರೆತು ಎಮ್ಮೆ ಮಾಡು ಕ್ಷೇತ್ರಕ್ಕೆ ಆಗಮಿಸಲಿದ್ದು, ಈಗಾಗಲೇ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News