ಮಂಗಳೂರು : ಬೈಕಿಗೆ ಟ್ಯಾಂಕರ್ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Update: 2020-02-13 11:40 GMT

ಮಂಗಳೂರು : ಟ್ಯಾಂಕರೊಂದು ಬೈಕ್ ಸವಾರನ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆಯ ಸುಮಾರಿಗೆ ನಂತೂರು ಸರ್ಕಲ್ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಮಣ್ಣಗುಡ್ಡೆ ನಿವಾಸಿ, ನಗರದ ಬೆಸೆಂಟ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಕಾರ್ತಿಕ್ ಮಲ್ಯ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸುರತ್ಕಲ್ ಕಡೆಯಿಂದ ನಂತೂರ್ ಸರ್ಕಲ್ ಬಳಿ ಬರುತ್ತಿದ್ದಂತೆ ಈ ಅಪಘಾತ ಸಂಭವಿಸಿದೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News