ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆ

Update: 2020-02-13 13:32 GMT

ಬೆಂಗಳೂರು, ಫೆ.13: ಬಿಬಿಎಂಪಿಯ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ನೇಮಕ ಮಾಡಿದೆ.

ಕಳೆದ ಆರು ತಿಂಗಳ ಹಿಂದಷ್ಟೇ ಬಿ.ಎಚ್. ಅನಿಲ್ ಕುಮಾರ್ ಅವರನ್ನು ರಾಜ್ಯ ಸರಕಾರ ಬಿಬಿಎಂಪಿಗೆ ಆಯುಕ್ತರನ್ನಾಗಿ ನೇಮಿಸಿತ್ತು. ಪ್ರಸಕ್ತ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಗೌರವ್ ಗುಪ್ತ ಅವರನ್ನು ಬಿಬಿಎಂಪಿಗೆ ನೂತನ ಆಯುಕ್ತರನ್ನಾಗಿ ನೇಮಿಸಲಾಗಿದೆ. ಗೌರವ್ ಗುಪ್ತ ಅವರು ಈ ಮೊದಲು ಬಿಬಿಎಂಪಿಯ ವಿಶೇಷ ಆಯುಕ್ತರಾಗಿ ಕೆಲಸ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News