ಮಹಿಳೆಯರ, ಮಕ್ಕಳ ರಕ್ಷಣಾ ಜವಾಬ್ದಾರಿ ಸರಿಯಾಗಿ ನಿರ್ವಹಿಸಿ : ಶ್ಯಾಮಲ ಎಸ್. ಕುಂದರ್

Update: 2020-02-13 15:19 GMT

ಉಡುಪಿ, ಫೆ.13: ಜಿಲ್ಲೆಯಲ್ಲಿ ಮಹಿಳೆಯರ ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸು ವಂತೆ ಭಾರತ ಸರಕಾರದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬುಧವಾರ ಬ್ರಹ್ಮಾವರ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳಿಗೆ ಸಂಬಂಧಿಸಿ ವಿವಿಧ ವಿಷಯಗಳ ಕುರಿತು ನಡೆದ ವಿಶೇಷ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಬುವಾರಬ್ರಹ್ಮಾವರಸ್ತ್ರೀಶಕ್ತಿವನದಲ್ಲಿ ಮಹಿಳಾ ಮತ್ತು ಮಕ್ಕಳಿಗೆ ಸಂಬಂಧಿಸಿ ವಿವಿವಿಷಯಗಳಕುರಿತುನಡೆದವಿಶೇಷಪರಿಶೀಲನಾಸೆಯಲ್ಲಿ ಅವರು ಮಾತನಾಡುತಿದ್ದರು. ಜಿಲ್ಲೆಯಲ್ಲಿ ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆದಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಹಾಜರಿದ್ದ ಆರಕ್ಷಕ ಅಧಿಕಾರಿ ಗಳಿಂದ ಮಾಹಿತಿ ಪಡೆದ ಶ್ಯಾಮಲಾ ಕುಂದರ್, ಈವರೆಗೆ ದಾಖಲಾದ ಪ್ರಕರಣಗಳು, ವಿಲೇವಾರಿ ಯಾದ ಪ್ರಕರಣಗಳು ಹಾಗೂ ಅನುಸರಣೆಯಲ್ಲಿರುವ ಪ್ರಕರಣಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದರು.

ಮುಂದುವರಿದ ಜಿಲ್ಲೆಗಳಾಗಿರುವ ಕರಾವಳಿ ಭಾಗದಲ್ಲಿ, ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದ್ದು, ದೇಶದ ಹಾಗೂ ರಾಜ್ಯದ ಇತರೆಡೆಗಳಿಗೆ ಹೋಲಿಸಿದಾಗ ಇಂತಹ ಪ್ರಕರಣಗಳ ಸಂಖ್ಯೆ ವಿರಳವಿರಬಹುದು. ಆದರೂ, ಇಲ್ಲೂ ಕೆಲವೊಂದು ಪ್ರದೇಶಗಳಲ್ಲಿ ಪ್ರಕರಣಗಳು ಕಂಡು ಬರುತ್ತಿದ್ದು, ಈ ಬಗ್ಗೆ ಸಂಬಂಧಿತ ಇಲಾಖೆಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಿ ಮಹಿಳೆಯರ/ಮಕ್ಕಳ ರಕ್ಷಣೆಯ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಕರೆ ನೀಡಿದರು.

ವಿಶೇಷವಾಗಿ ಇತರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಕಾರ್ಮಿಕರು ಉಡುಪಿ ಜಿಲ್ಲೆಗೆ ಆಗಮಿಸುತ್ತಿದ್ದು, ಅಂತಹವರಿಗೆ ಮೂಲಭೂತ ಸೌಕರ್ಯ ಹಾಗೂ ರಕ್ಷಣೆ ಒದಗಿಸುವ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣಾ ಹಂತವನ್ನು ಹಾಗೂ ತನಿಖೆಯ ಬಗ್ಗೆ ವರದಿಯನ್ನು ಸಮಯೋಚಿತವಾಗಿ ಸಲ್ಲಿಸಲು ಹಾಗೂ ಸಮಸ್ಯೆಗಳಿಗೆ ಸಂವೇದನಾತ್ಮಕವಾಗಿ ಸ್ಪಂದಿಸಲು ಆರಕ್ಷಕ ಅಧಿಕಾರಿಗಳಿಗೆ ಶ್ಯಾಮಲಾ ಕುಂದರ್ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ಥಳೀಯ ತಾಪಂ ಸದಸ್ಯ ಸುಧೀರ್‌ಕುಮಾರ್ ಶೆಟ್ಟಿ, ಸ್ಥಳೀಯ ಗ್ರಾಪಂ ಕಾರ್ಯದರ್ಶಿ, ಬ್ರಹ್ಮಾವರ ಆರಕ್ಷಕ ಠಾಣೆಯ ಆರಕ್ಷಕ ನಿರೀಕ್ಷಕರು, ಮಹಿಳಾ ಆರಕ್ಷಕ ಠಾಣೆಯ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News