ಗುಣಮಟ್ಟದ ಪಡಿತರ ವಿತರಣೆಗೆ ಕ್ರಮ: ಆಹಾರ ಸಚಿವ ಕೆ.ಗೋಪಾಲಯ್ಯ

Update: 2020-02-13 17:20 GMT

ಬೆಂಗಳೂರು, ಫೆ. 13: ಬಿಪಿಎಲ್ ಕಾರ್ಡುದಾರರಿಗೆ ಗುಣಮಟ್ಟದ ಪಡಿತರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಗೋಪಾಲಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ವಿಕಾನಸೌಧದಲ್ಲಿ ತಮ್ಮ ನೂತನ ಕಚೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ತಿಂಗಳ ಮೊದಲ ವಾರದಲ್ಲೆ ಪಡಿತರ ವಿತರಣೆಯಾಗುವಂತೆ ನೋಡಿಕೊಳ್ಳಲಾಗುವುದು. ಅಲ್ಲದೆ, ಗುಣಮಟ್ಟ ಕಾಯ್ದುಕೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಮಠಗಳಿಗೆ ಯಾವುದೇ ಕಾರಣಕ್ಕೂ ಪಡಿತರ ನಿಲ್ಲಿಸುವುದಿಲ್ಲ. ಮಠ- ಮಾನ್ಯಗಳು ತಮ್ಮದೆ ರೀತಿಯಲ್ಲಿ ಜನ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಲ್ಲದೆ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿವೆ. ತಾಂತ್ರಿಕ ಕಾರಣಗಳಿಗಾಗಿ ಪಡಿತರ ವಿತರಣೆಯಲ್ಲಿ ವ್ಯತ್ಯಾಸ ಆಗಿತ್ತು. ಇದೀಗ ಅದನ್ನು ಸರಿಪಡಿಸಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ತಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ನನಗೆ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಿದ್ದು, ಅದನ್ನು ಸಮರ್ಥವಾಗಿ ನಿರ್ವಹಿಸುವೆ ಎಂದ ಅವರು, ಇಲಾಖೆ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ವೇಳೆ ಸಿಎಂ ಜತೆ ಸಮಾಲೋಚನೆ ನಡೆಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News