ಬಿಎಂಟಿಸಿಯಲ್ಲಿ ಟಿಕೆಟ್ ರಹಿತ ಪ್ರಯಾಣ: ವಸೂಲಿ ಮಾಡಿದ ದಂಡ ಎಷ್ಟು ಲಕ್ಷ ರೂ. ಗೊತ್ತಾ ?

Update: 2020-02-13 18:18 GMT

ಬೆಂಗಳೂರು, ಫೆ.13: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಧೆ(ಬಿಎಂಟಿಸಿ) ವಾಹನಗಳಲ್ಲಿ ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ 10.51 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಬಿಎಂಟಿಸಿ ತನಿಖಾ ತಂಡಗಳು ಜನವರಿಯಲ್ಲಿ ಒಟ್ಟು 19,887 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 5898 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು 10.51 ಲಕ್ಷ ರೂ. ದಂಡ ವಸೂಲಿ ಮಾಡಿ ಸಂಸ್ಧೆಯ ನಿರ್ವಾಹಕರ ವಿರುದ್ಧ 2980 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 334 ಪುರುಷ ಪ್ರಯಾಣಿಕರಿಂದ ಒಟ್ಟು 33,400ರೂ. ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News