ಪುಲ್ವಾಮದಲ್ಲಿ ಹುತಾತ್ಮರಾದ ಸೈನಿಕರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ: ಪ್ರಧಾನಿ ಮೋದಿ

Update: 2020-02-14 08:28 GMT

ಹೊಸದಿಲ್ಲಿ, ಫೆ. 14:  ಕಳೆದ ವರ್ಷ ಪುಲ್ವಾಮದಲ್ಲಿ  ದಾಳಿಯಲ್ಲಿ ಹುತಾತ್ಮರಾದ ಸೈನಿಕರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಹುತಾತ್ಮರಾದ ಭದ್ರತಾ ಸಿಬ್ಬಂದಿ ರಾಷ್ಟ್ರದ ಸೇವೆ ಮತ್ತು ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ "ಅಸಾಧಾರಣ ವ್ಯಕ್ತಿಗಳು" ಎಂದು ಅವರು ಬಣ್ಣಿಸಿ ಟ್ವೀಟ್ ಮಾಡಿದ್ದಾರೆ.

2019 ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಲೆಥ್‌ಪೋರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುವ ವಾಹನಗಳ ಮೇಲೆ  ಉಗ್ರರು ನಡೆಸಿದ  ಆತ್ಮಾಹುತಿ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಹುತಾತ್ಮ ಯೋಧರಿಗೆ ಮೋದಿ ಗೌರವ ಸಲ್ಲಿಸಿದ್ದಾರೆ. 

"ಕಳೆದ ವರ್ಷ ನಡೆದ ಭೀಕರ ಪುಲ್ವಾಮ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಹುತಾತ್ಮರಿಗೆ ಗೌರವ. ಅವರು ನಮ್ಮ ರಾಷ್ಟ್ರದ ಸೇವೆ ಮತ್ತು ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಭಾರತ ತಮ್ಮ ಹುತಾತ್ಮತೆಯನ್ನು ಎಂದಿಗೂ ಮರೆಯುವುದಿಲ್ಲ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಪುಲ್ವಾಮ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮತ್ತು ಮಾತೃಭೂಮಿಗೆ "ಸರ್ವೋಚ್ಚ ತ್ಯಾಗ" ಮಾಡಿದ ಅವರ ಕುಟುಂಬಗಳಿಗೆ ರಾಷ್ಟ್ರ ಭಾರತ ಎಂದೆಂದಿಗೂ "ಕೃತಜ್ಞರಾಗಿರಬೇಕು" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News