ಒಮರ್ ಅಬ್ದುಲ್ಲಾ ಬಂಧನ: ಜಮ್ಮು-ಕಾಶ್ಮೀರ ಆಡಳಿತಕ್ಕೆ ಸುಪ್ರೀಂಕೋರ್ಟ್ ನೋಟಿಸ್

Update: 2020-02-14 08:38 GMT

ಹೊಸದಿಲ್ಲಿ, ಫೆ.14: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಶುಕ್ರವಾರ ಜಮ್ಮು-ಕಾಶ್ಮೀರ ಸರಕಾರಕ್ಕೆ ನೋಟಿಸ್ ಕಳುಹಿಸಿದೆ. ಮಾ.2ರೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಆದೇಶಿಸಿದೆ.

ಜಮ್ಮು-ಕಾಶ್ಮೀರದಲ್ಲಿ ವಿಧಿ 370ನ್ನು ರದ್ದುಪಡಿಸಿದ ಬಳಿಕ ಆಗಸ್ಟ್ 5ರಂದು ಅಬ್ದುಲ್ಲಾರನ್ನು ಬಂಧನದಲ್ಲಿರಿಸಲಾಗಿದೆ.

ತನ್ನ ಸಹೋದರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾರನ್ನು ಪಿಎಸ್‌ಎ ಅಡಿ ಬಂಧನದಲ್ಲಿಟ್ಟಿದ್ದನ್ನು ಪ್ರಶ್ನಿಸಿ ಸಾರಾ ಅಬ್ದುಲ್ಲಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News