×
Ad

ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯ ಕೊಲೆ

Update: 2020-02-14 22:05 IST

ಬೆಂಗಳೂರು, ಫೆ.14: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ತಲಘಟ್ಟಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ಮಹದೇವ್ ಪ್ರಸಾದ್(60) ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.

ತಲಘಟ್ಟಪುರ ಬಳಿಯ ಗುಬ್ಬಲಾಳ ಸಮೀಪ ಮಹದೇವ್ ಪ್ರಸಾದ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಆಸ್ತಿ ವಿಚಾರವಾಗಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News