ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2020-02-14 17:01 GMT

ಉಡುಪಿ, ಫೆ.14: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಫೆ.18ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಫೆ.19ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ 20ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂದಪಟ್ಟ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು. ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫಿದವಿತ್ ಮಾಡಿಸಿ, ಸಂಬಂಧಪಟ್ಟ ದಾಖಲೆಗಳ ಪ್ರತಿಯೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದು. ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ಘಟಕದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ:0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ (0820-2536661) ಇವರನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಇನ್ಸ್‌ಪೆಕ್ಟರ್, ಕರ್ನಾಟಕ ಲೋಕಾಯುಕ್ತ ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News