ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Update: 2020-02-14 17:59 GMT

ಕಲಬುರಗಿ (ಸೇಡಂ), ಫೆ.14: ತಾಲೂಕಿನ ಶಿಲಾರಕೋಟ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಇಂದು ಶಾಲೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳಲ್ಲಿ ಸಂಜೆ 4 ಗಂಟೆ ಸುಮಾರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ಇದರಿಂದ ಗಾಬರಿಗೊಂಡು ಪೋಷಕರು ಮತ್ತು ಶಿಕ್ಷಕರು ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಿ ಚಿಕಿತ್ಸೆ ಒದಗಿಸಿದರು.

ಅಸ್ವಸ್ಥ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದಂತೆ ವಿದ್ಯಾರ್ಥಿಗಳನ್ನು ಸೇಡಂ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ನೀಡಿಲಾಗುತ್ತಿದ್ದು, 25 ಮಕ್ಕಳಲ್ಲಿ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಅನೇಕ ದಿನಗಳಿಂದ ಬಿಸಿ ಊಟದಲ್ಲಿ ಹುಳಗಳು ಕಾಣಿಸಿಕೊಳ್ಳುತ್ತಿತ್ತು ಎಂಬ ಆರೋಪ ಕೇಳಿ ಬರುತ್ತಿದ್ದು, ಶಿಕ್ಷಕರು ಮತ್ತು ಬಿಸಿಯೂಟ ಅಡುಗೆ ತಯಾರಕರ ನಿರ್ಲಕ್ಷದಿಂದ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಧೋಳ ಆಸ್ಪತ್ರೆಗೆ ಪಿಐ ತಮ್ಮಾರಾಯ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News