ಮೈಸೂರು: ಅನಿಲ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Update: 2020-02-14 18:33 GMT

ಮೈಸೂರು,ಫೆ.14: ದಿನದಿಂದ ದಿನಕ್ಕೆ ಅಡುಗೆ ಅನಿಲ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ಮೈಸೂರು ನಗರ ಹಾಗೂ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ಗಾಂಧಿ ಚೌಕದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಹೊರೆಯಾಗಿಸುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೆ ದುಡಿದ ಹಣವನ್ನೆಲ್ಲ ತಿಂಗಳಿಗೆ ಗ್ಯಾಸ್ ಖರೀದಿಸಲು ನೀಡಿದರೆ ಸಾಮಾನ್ಯರು ಏನನ್ನು ತಿನ್ನಬೇಕು. ಪ್ರತಿಯೊಂದು ವಸ್ತುವಿನ ಬೆಲೆಯೂ ಏರಿಕೆಯಾಗುತ್ತಲೇ ಇದೆ. ಬೆಲೆಯೇರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಪಾಲಿಕೆಯ ಸದಸ್ಯೆಯರು, ಕಾಂಗ್ರೆಸ್ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News