ಶಿವಮೊಗ್ಗ: ಸಿಎಎ ವಿರೋಧಿಸಿ ಉಪವಾಸ ಧರಣಿ

Update: 2020-02-15 06:23 GMT

ಶಿವಮೊಗ್ಗ, ಫೆ.15: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ಶನಿವಾರ ಬೆಳಗ್ಗೆಯಿಂದ ಆರಂಭಗೊಂಡಿದೆ.

ಸಿಎಎ ದೇಶದ ಸಂವಿಧಾನದ ಮೂಲ ಆಶಯಕ್ಕೆ ಮತ್ತು ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿಗೆ ವಿರುದ್ದವಾಗಿದೆ. ಇದು ಜಾತಿ ತಾರತಮ್ಯತೆಯಿಂದ ಕೂಡಿದೆ. ಇದು ಭಾರತದ ಜಾತ್ಯತೀತತೆಯ ಪರಂಪರೆ ಕೊನೆ ಹಾಡಲಿದೆ ಎಂದು ಪ್ರತಿಭಟನಾಕಾರರು ಅಕ್ರೋಶ ವ್ಯಕ್ತಪಡಿಸಿದರು.

ಸಿಎಎಯನ್ನು ವಿರೋಧಿಸುವುದರ ಜೊತೆಗೆ ಎನ್.ಆರ್.ಸಿ., ಎನ್.ಆರ್.ಪಿ.ಯನ್ನು ದೇಶದಲ್ಲಿ ಜಾರಿಗೆ ತಂದಿರುವುದು ಕೂಡ ವಿರೋಧಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News