ಮಂಗಳೂರು ಗೋಲಿಬಾರ್ ಪ್ರಕರಣ: ಫೆ.19ರಂದು ವೀಡಿಯೋ ತುಣುಕು, ಸಾಕ್ಷ್ಯಗಳನ್ನು ಸಲ್ಲಿಸಲು ಅವಕಾಶ

Update: 2020-02-15 12:52 GMT
ಫೈಲ್ ಚಿತ್ರ

ಮಂಗಳೂರು, ಫೆ.15: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ 2019ರ ಡಿ.19ರಂದು ನಡೆದ ಮಂಗಳೂರು ಗೋಲಿಬಾರ್ ಪ್ರಕರಣದ ಬಗ್ಗೆ ಮ್ಯಾಜಿಸ್ಟಿರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಯನ್ನು ಸರಕಾರ ನೇಮಿಸಿದೆ.

ಈ ಸಂಬಂಧ 2019ರ ಡಿ.19ರಂದು ನಡೆದ ಘಟನೆ ಬಗ್ಗೆ ಸಾರ್ವಜನಿಕರು ಹಾಗೂ ಪತ್ರಿಕೆ/ವಾರ್ತಾ ಮಾಧ್ಯಮದವರ ಬಳಿ ವೀಡಿಯೋ ತುಣುಕುಗಳು ಇದ್ದಲ್ಲಿ ಫೆ.19ರಂದು ಪೂ.11ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಹಂಪನಕಟ್ಟೆ -ಇಲ್ಲಿ ನಡೆಯುವ ವಿಚಾರಣೆಯ ಸಂದರ್ಭ ಹಾಜರುಪಡಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News