ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಸೆರೆ, ನಗದು ಜಪ್ತಿ

Update: 2020-02-15 13:19 GMT

ಬೆಂಗಳೂರು, ಫೆ.15: ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಚಿಕ್ಕಪೇಟೆಯ ಆರ್‌ಟಿ ಸ್ಟ್ರೀಟ್‌ನ ರೋಷನ್ ಕುಮಾರ್(40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಪೇಟೆಯ ಡಿಕೆ ಲೇನ್‌ನ ಕವಿತಾ ಮ್ಯಾಚಿಂಗ್ ಸೆಂಟರ್ ಬಳಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ರೋಷನ್ ಮೊಬೈಲ್ ಮೂಲಕ ಹಣವನ್ನು ಕಟ್ಟಿಸಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದು, ಬಂಧಿತನಿಂದ 67 ಸಾವಿರ ರೂ. ನಗದು ಹಾಗೂ ಮೊಬೈಲ್ ವಶಪಡಿಸಿಕೊಂಡು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News