7ನೇ ತರಗತಿ ಮೌಲ್ಯಾಂಕನಾ ಪರೀಕ್ಷಾ ವೇಳಾಪಟ್ಟಿ ಪರಿಷ್ಕರಣೆ

Update: 2020-02-15 13:21 GMT

ಬೆಂಗಳೂರು, ಫೆ.15: ಏಳನೇ ತರಗತಿಯ ಮೌಲ್ಯಾಂಕನ ಪರೀಕ್ಷಾ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಮಾ.16 ರಿಂದ 21 ರವರೆಗೆ ನಡೆಯಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಈ ಹಿಂದೆ ಮಾ.9 ರಿಂದ 14 ರವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಅದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕೊಠಡಿ ಸಮಸ್ಯೆ ಎದುರಾಗುವ ಸಾಧ್ಯತೆಯಿರುತ್ತದೆ. ಆದುದರಿಂದ ವೇಳಾಪಟ್ಟಿ ಬದಲಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮನವಿ ಮಾಡಿತ್ತು.

ಪರಿಷ್ಕೃತ ವೇಳಾಪಟ್ಟಿ: ಮಾ.16: ಪ್ರಥಮ ಭಾಷೆ, ಮಾ.17: ದ್ವಿತೀಯ ಭಾಷೆ, ಮಾ.18: ತೃತೀಯ ಭಾಷೆ, ಮಾ.19:ಗಣಿತ, ಮಾ.20 ವಿಜ್ಞಾನ ಹಾಗೂ ಮಾ.21 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News