ಫೆ.19ರಂದು ರಾಜ್ಯ ಸರಕಾರಿ ನೌಕರರರಿಂದ ವಿಧಾನಸೌಧ ಚಲೋ

Update: 2020-02-15 13:25 GMT

ಬೆಂಗಳೂರು, ಫೆ.15: ರಾಜ್ಯ ಸರಕಾರಿ ನೌಕರರ ಮೂಲ ಪಿಂಚಣಿ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.19ರಂದು ಬೆಳಗ್ಗೆ 10ಕ್ಕೆ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್.ಭೈರಪ್ಪ ತಿಳಿಸಿದ್ದಾರೆ.

ಶನಿವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.19ರಂದು ಬೆಳಗ್ಗೆ 10ಕ್ಕೆ ರ್ಯಾಲಿಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭಗೊಳ್ಳಲಿದೆ. ನಂತರ ಫ್ರೀಡಂ ಪಾರ್ಕ್ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

ರಾಜ್ಯ ಸರಕಾರಿ ನಿವೃತ್ತ ನೌಕರರಿಗೆ ನಗದು ರಹಿತ ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು, ಪ್ರಯಾಣ ದರದಲ್ಲಿ ರಿಯಾಯಿತಿ ನೀಡಬೇಕು. ಸರಕಾರಿ ನಿವೃತ್ತ ನೌಕರರ ಶವ ಸಂಸ್ಕಾರ ಭತ್ತೆ ನೀಡಬೇಕು. ಸರಕಾರಿ ನಿವೃತ್ತ ನೌಕರರ ಸಂಘಕ್ಕೆ ನಿವೇಶನ ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News