ಫಿಟ್ನೆಸ್ ಪರೀಕ್ಷೆಯಲ್ಲಿ ಇಶಾಂತ್ ಶರ್ಮಾ ಉತ್ತೀರ್ಣ

Update: 2020-02-15 18:04 GMT

ಹೊಸದಿಲ್ಲಿ, ಫೆ.15: ಹಿರಿಯ ವೇಗದ ಬೌಲರ್ ಇಶಾಂತ್ ಶರ್ಮಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ನಿಟ್ಟುಸಿರುಬಿಟ್ಟಿದ್ದಾರೆ. ಇಶಾಂತ್ ಫೆಬ್ರವರಿ 21ರಿಂದ ಆರಂಭವಾಗಲಿರುವ ನ್ಯೂಝಿಲ್ಯಾಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿರುವ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ಹೌದು, ಇಶಾಂತ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಅವರು ನ್ಯೂಝಿಲ್ಯಾಂಡ್‌ನಲ್ಲಿ ಟೆಸ್ಟ್ ಸರಣಿಯನ್ನಾಡಲು ಭಾರತೀಯ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News