​ಅಬ್ಬಕ್ಕ ಪ್ರಶಸ್ತಿಗೆ ಮಹಿಳಾ ಸಾಧಕರಿಂದ ಅರ್ಜಿ ಅಹ್ವಾನ

Update: 2020-02-15 18:15 GMT

ಮಂಗಳೂರು, ಫೆ.15: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ ಫೆ.29 ಮತ್ತು ಮಾ.1ರಂದು ಜರಗುವ ‘ವೀರರಾಣಿ ಅಬ್ಬಕ್ಕ ಉತ್ಸವ-2020’ ಕಾರ್ಯಕ್ರಮದಲ್ಲಿ ನೀಡಲಾಗುವ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಸಾಧಕ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರಾವಳಿ ಮೂಲದ ಇಬ್ಬರು ಮಹಿಳೆಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದು ನಾಡು-ನುಡಿಗೆ ವಿಶೇಷ ಕೊಡುಗೆ ನೀಡಿದವರಾಗಿರಬೇಕು. ಕಲೆ, ಕ್ರೀಡೆ, ರಂಗಭೂಮಿ ಅಥವಾ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಅರ್ಹ ಸಾಧಕರು ಅಥವಾ ಅವರ ಬಗ್ಗೆ ಸೂಕ್ತ ದಾಖಲೆಯನ್ನು ಫೆ.19ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News