ಶಾಲೆಗಳಲ್ಲಿ ಕನ್ನಡ ಬೋಧನೆ ಕುರಿತು ಉನ್ನತ ಮಟ್ಟದ ಸಮಿತಿ ರಚನೆ

Update: 2020-02-15 18:24 GMT

ಬೆಂಗಳೂರು, ಫೆ.15: ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧನೆ ಮಾಡದ ಶಾಲೆಗಳನ್ನು ಪರಿಶೀಲನೆ ನಡೆಸಲು ಮತ್ತು ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಸರಕಾರಿ ಶಾಲೆಗಳ ಸಬಲೀಕರಣದ ಕುರಿತಂತೆ ಕ್ರಮ ತೆಗೆದುಕೊಳ್ಳಲು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಈ ಕೆಳಕಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಅಭಿಯಾನ, ಕರ್ನಾಟಕ ಬೆಂಗಳೂರು, ಅಪರ ಆಯುಕ್ತರು, ಅಪರ ಆಯುಕ್ತಾಲಯ, ಸಾರ್ವಜನಿಕ ಶಿಕ್ಞಣ ಇಲಾಖೆ. ಧಾರವಾಡ. ಅಪರ ಆಯುಕ್ತರು, ಅಪರ ಆಯುಕ್ತಾಲಯ, ಸಾರ್ವಜನಿಕ ಶಿಕ್ಞಣ ಇಲಾಖೆ, ಕಲಬುರಗಿ, ನಿರ್ದೇಶಕರು, (ಪ್ರೌಢ ಶಿಕ್ಷಣ) ಆಯುಕ್ತರ ಕಚೇರಿ, ಬೆಂಗಳೂರು, ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಸಂಪರ್ಕ ಇಲಾಖೆ, ಡಾ..ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞರು ಇವರುಗಳು ಸಮಿತಿಯ ಸದಸ್ಯರಾಗಿರುತ್ತಾರೆ. ನಿರ್ದೇಶಕರು, (ಪ್ರಾಥಮಿಕ ಶಿಕ್ಷಣ) ಆಯುಕ್ತರ ಕಚೇರಿ, ಬೆಂಗಳೂರು, ಇವರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News