ಬಸ್ಸಿಗೆ ಕಲ್ಲೆಸೆದ ಪ್ರಕರಣ: ಆರೋಪಿಗೆ ನಿರೀಕ್ಷಣಾ ಜಾಮೀನು

Update: 2020-02-15 18:59 GMT

ಪುತ್ತೂರು: ತಾಲೂಕಿನಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಆ.12ರಂದು ಬಸ್ಸು ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟ ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ ವ್ಯಕ್ತಿಗಳು ಆಕ್ರೊಶಗೊಂಡು ಅಪಘಾತಕ್ಕೆ ಕಾರಣವಾದ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣದ ಆರೋಪಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ಬಸ್ಸು ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದರು. ಈ ಬಗ್ಗೆ ಬಸ್ಸು ಮಾಲಕ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಉಸ್ಮಾನ್ ಎಂಬವರು ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ಜಾಮಿನು ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಾಧೀಶರು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದ್ದಾರೆ. 

ಅರ್ಜಿದಾರರ ಪರವಾಗಿ ನ್ಯಾಯವಾದಿ ಇಬ್ರಾಹಿಂ ಬಾತಿಷಾ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News