ಬೋರ್‌ವೆಲ್ ಕೊರೆಯುತ್ತಿದ್ದ ವೇಳೆ ಭೂಕುಸಿತ: 15 ಅಡಿ ಆಳದಲ್ಲಿ ಸಿಲುಕಿರುವ ವ್ಯಕ್ತಿ

Update: 2020-02-16 08:16 GMT

ಉಡುಪಿ, ಫೆ.16: ಕೊಳೆವೆಬಾವಿ ಕೊರೆಯುತ್ತಿದ್ದ ವೇಳೆ ಉಂಟಾದ ಭೂಕುಸಿತದಲ್ಲಿ ವ್ಯಕ್ತಿಯೋರ್ವ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.

ಸ್ಥಳೀಯ ನಿವಾಸಿ ರೋಹಿತ್ ಖಾರ್ವಿ ಭೂ ಕುಸಿತದಲ್ಲಿ ಸಿಲುಕಿರುವ ವ್ಯಕ್ತಿಯಾಗಿದ್ದಾರೆ. ಕೊಳವೆಬಾವಿ ಕೊರೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅದರ ಸುತ್ತ ಭಾರೀ ಆಳಕ್ಕೆ ಭೂಕುಸಿತ ಉಂಟಾಗಿದೆ. ಈ ವೇಳೆ ಸುಮಾರು 15 ಅಡಿಯಷ್ಟು ಮಣ್ಣು ಕುಸಿದಿದ್ದು, ಸ್ಥಳದಲ್ಲಿದ್ದ ರೋಹಿತ್ ಖಾರ್ವಿ ಅದರಲ್ಲಿ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣಾ ಕಾಯಾಚರಣೆಗೆ ಬಿರುಸಿನಿಂದ ನಡೆಯುತ್ತಿದೆ.

ಈ ನಡುವೆ ರೋಹಿತ್ ಖಾರ್ವಿ ಸುರಕ್ಷಿತವಾಗಿದ್ದು, 15 ಅಡಿ ಆಳದಿಂದ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ವೈದ್ಯರು ಆಗಮಿಸಿದ್ದಾರೆ. ಸ್ಥಳೀಯರು ಕೂಡಾ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಇನ್ನಷ್ಟು ಮಣ್ಣು ಕುಸಿಯದಂತೆ ಡ್ರಮ್‌ಗಳನ್ನು ಅಳವಡಿಸಲಾಗಿದೆ. ರಕ್ಷಣೆಗೆ ಜೇಸಿಬಿಯನ್ನು ಬಳಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News