ನಾವು ವೀಡಿಯೊ ಬಿಡುಗಡೆ ಮಾಡಿಲ್ಲ: ಜಾಮಿಯಾ ವಿ.ವಿ.

Update: 2020-02-16 14:26 GMT
Photo: Twitter

ಹೊಸದಿಲ್ಲಿ, ಫೆ. 16:  ಡಿಸೆಂಬರ್ 15ರಂದು ಜಾಮಿಯಾ ವಿ.ವಿ. ಗ್ರಂಥಾಲಯದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆಯ ವೀಡಿಯೊವನ್ನು ತಾನು ಬಿಡುಗಡೆಗೊಳಿಸಿಲ್ಲ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ಹೇಳಿದೆ.

ಮಾಧ್ಯಮಕ್ಕೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಜಾಮಿಯಾ ವಿಶ್ವವಿದ್ಯಾನಿಲಯ, ಡಾ. ಝಾಕಿರ್ ಹುಸೈನ್ ಲೈಬ್ರೆರಿಯಲ್ಲಿ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿ ಕೆಲವು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ವೀಡಿಯೊವನ್ನು ವಿಶ್ವವಿದ್ಯಾನಿಲಯ ಬಿಡುಗಡೆಗೊಳಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜಾಮಿಯಾ ವಿ.ವಿ.ಯ ಗೇಟ್ ಸಂಖ್ಯೆ 7ರ ಹೊರಗಡೆ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಾಮಿಯಾ ಸಮನ್ವಯ ಸಮಿತಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ಅಧಿಕೃತ ಸಮಿತಿ ಅಲ್ಲ ಎಂದು ಹೇಳಿಕೆ ತಿಳಿಸಿದೆ. ಜಾಮಿಯಾ ಸಮನ್ವಯ ಸಮಿತಿಯ ಯಾವುದೇ ಹೇಳಿಕೆಯನ್ನು ವಿಶ್ವವಿದ್ಯಾನಿಲಯದ ಹೇಳಿಕೆ ಎಂದು ಪರಿಗಣಿಸಬಾರದು ಎಂದು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ಹೇಳಿಕೆ ತಿಳಿಸಿದೆ.

ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಸಮರ್ಥಿಸಿಕೊಳ್ಳುವುದು ಅಮಿತ್ ಶಾ ಅವರ ಅಸತ್ಯ, ದಾರಿತಪ್ಪಿಸುವ ಹಾಗೂ ರಾಜಕೀಯ ಪ್ರೇರಿತ ಕ್ರಮವಾಗಿದೆ. ದಿಲ್ಲಿ ಪೊಲೀಸರು ನೇರವಾಗಿ ಮೋದಿ-ಶಾ ಅವರ ಅಧಿಕಾರ ವ್ಯಾಪ್ತಿಯ ಒಳಗಡೆ ಬರುತ್ತಾರೆ. ಗ್ರಂಥಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ಯುವ ವಿದ್ಯಾರ್ಥಿಗಳನ್ನು ಹೇಗೆ ನಡೆಸಿಕೊಳ್ಳಲಾಗಿದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಇದು ನಾಚಿಕೆಗೇಡಿನ ವಿಚಾರ.

ಸೀತಾರಾಮ ಯೆಚೂರಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News