ಪಾಕ್ ಪರ ಘೋಷಣೆ ಕೂಗಿದ ಆರೋಪ: ಬಂಧಿತರಾಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆ

Update: 2020-02-16 14:38 GMT

ಹುಬ್ಬಳ್ಳಿ, ಫೆ. 16: ಇಲ್ಲಿನ ಕೆಎಲ್‌ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪೊಲೀಸರು ಮುಚ್ಚಳಿಕೆ ಪತ್ರ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ.

ನಗರದ ಗೋಕುಲ್ ರಸ್ತೆ ಠಾಣಾ ಪೊಲೀಸರು ಕೆಎಲ್‌ಇ ಕಾಲೇಜಿನ ಇಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿರುವ ಅಮಿತ್, ತಾಲೀಬ್ ಮತ್ತು ಬಾಸಿತ್ ಅವರನ್ನು ಠಾಣೆಯಲ್ಲೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮಂದಿ ಆಕ್ಷೇಪಿಸಿದ್ದಾರೆ.

ಮೂವರು ಕಾಶ್ಮೀರದ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. ಅಲ್ಲದೆ, ಪೊಲೀಸರ ವಿಚಾರಣೆಗೆ ಅಗತ್ಯ ಸಹಕಾರ ನೀಡುತ್ತೇವೆಂದು ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ದಿಲೀಪ್ ಸ್ಪಷ್ಟಣೆ ನೀಡಿದ್ದಾರೆ.

ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ, ಕೋಮು ಸೌಹಾರ್ದ ಕದಡಿದ ಆರೋಪ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಇದೀಗ ಬಾರಿ ಸುದ್ಧಿಯಾದ ಹಿನ್ನೆಲೆಯಲ್ಲಿ ಮೂವರು ವಿದ್ಯಾರ್ಥಿಗಳನ್ನು ಹುಬಳ್ಳಿ ಕೆಎಲ್‌ಇ ಕಾಲೇಜಿನಿಂದ ಬೆಳಗಾವಿಗೆ ಕಳುಹಿಸಲಾಗಿದೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News