ಉಡುಪಿ: 108 ಆ್ಯಂಬುಲೆನ್ಸ್‌ನಲ್ಲಿ ಗಂಡು ಮಗುವಿಗೆ ಜನನ

Update: 2020-02-16 15:39 GMT

ಉಡುಪಿ, ಫೆ.16: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆ ಯೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ 108 ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ರವಿವಾರ ಉುಪಿ ಕರಾವಳಿ ಬೈಪಾಸ್ ಬಳಿ ನಡೆದಿದೆ.

ಮಲ್ಪೆಯ ಮಾಲಿ ಬಾಯಿ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೂಡಲೇ 108 ಅಂಬುಲೆನ್ಸ್‌ನಲ್ಲಿ ಅವರನ್ನು ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೆ ಆಕೆ ಮಾರ್ಗ ಮಧ್ಯದಲ್ಲಿ ತೀವ್ರ ಹೆರಿಗೆ ನೋವಿನ ಪರಿಣಾಮ ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದರು.

ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ಕರೆ ತಂದು ದಾಖಲಿಸಲಾಯಿತು. ಡಾ.ಮೇಧಾ, ತಾಯಿ ಹಾಗೂ ಮಗುವಿನ ಆರೈಕೆ ನೋಡಿಕೊಳ್ಳುತ್ತಿದ್ದಾರೆ. ಆ್ಯಂಬುಲೆನ್ಸ್‌ನ ತುರ್ತುವೈದ್ಯಕೀಯ ತಜ್ಞ ಸಂತೋಷ್ ಆರ್., ಚಾಲಕ ಸಂಜೀವ್ ಜಮ್ಕಂಡಿ ಸಹಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News