ರಾಜ್ಯದಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಿರುವ ಇಂಡಿಯನ್ ಆಯಿಲ್

Update: 2020-02-16 16:36 GMT

ಬೆಂಗಳೂರು, ಫೆ.16: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಚಿತ್ರದುರ್ಗದಲ್ಲಿ 500 ಕೋಟಿ ರೂ.ಗಳ ಹೂಡಿಕೆ ಮಾಡುತ್ತಿದ್ದು, ಸುಮಾರು 120 ಎಕರೆ ಪ್ರದೇಶದಲ್ಲಿ ಸಾಮಾನ್ಯ ಬಳಕೆ ಸೌಲಭ್ಯ(ಸಿಯುಎಫ್) ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸ್ವೀಕರಿಸುವ, ದಾಸ್ತಾನು ಮತ್ತು ವಿತರಿಸುವ ಟರ್ಮಿನಲ್(ಪಿಓಎಲ್) ಸ್ಥಾಪಿಸಲಿದೆ.

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಸಂದರ್ಭದಲ್ಲಿ ಇಂಡಿಯನ್ ಆಯಿಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ರಾಜ್ಯ ಮುಖ್ಯಸ್ಥ ಡಿ.ಎಲ್.ಪ್ರಮೋದ್ ಮತ್ತು ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ತಿಳುವಳಿಕೆ ಒಪ್ಪಂದ(ಎಂಓಯು)ಕ್ಕೆ ಅಂಕಿತ ಹಾಕಿ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News