ಇನ್ನೂ ಅಂಗೀಕಾರವಾಗದ ರಾಹುಲ್ ಜೋಹ್ರಿ ರಾಜೀನಾಮೆ

Update: 2020-02-17 03:35 GMT

  ಹೊಸದಿಲ್ಲಿ, ಫೆ. 16: ಬಿಸಿಸಿಐನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಜೋಹ್ರಿ ಅವರು ತಮ್ಮ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅವರು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ.

       ಸುಪ್ರೀಂ ಕೋರ್ಟ್ ನೇಮಕ ಮಾಡಿದ ಆಡಳಿತಾಧಿಕಾರಿಗಳ ಸಮಿತಿ(ಸಿಒಎ)ಗೆಕಳೆದ ವರ್ಷ ಅಕ್ಟೋಬರ್‌ನಲ್ಲಿ ಜೋಹ್ರಿ ಅವರ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅವರ ರಾಜೀನಾಮೆ ಅಂಗೀಕಾರವಾಗಲು ಇನ್ನೆಷ್ಟು ದಿನ ಕಾಯಬೇಕಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಅವರು ಮತ್ತೆ ಈ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲವೊಂದು ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದೆ.

 ಸಿಇಒ ಹುದ್ದೆಯನ್ನು ವಹಿಸಿಕೊಂಡಾಗಿನಿಂದ ಜೋಹ್ರಿ ಅನೇಕ ರಂಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಐಪಿಎಲ್ ಪ್ರಸಾರ ಹಕ್ಕುಗಳನ್ನು ಸ್ಟಾರ್ ಇಂಡಿಯಾಕ್ಕೆ 16,348 ಕೋಟಿ ರೂ.ಗಳಿಗೆ ನೀಡುವಲ್ಲಿ ಜೋಹ್ರಿ ಪ್ರಮುಖ ಪಾತ್ರ ವಹಿಸಿದ್ದಾರೆ.

 ಶಶಾಂಕ್ ಮನೋಹರ್ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ಮತ್ತು ಅನುರಾಗ್ ಠಾಕೂರ್ ಅದರ ಕಾರ್ಯದರ್ಶಿಯಾಗಿದ್ದಾಗ ಅವರನ್ನು ಮುಖ್ಯ ಕಾರ್ಯನಿರ್ವ ಹಣಾಧಿ ಕಾರಿಯಾಗಿ ನೇಮಕ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News