ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ನೆರವು : ವಿಧಾನ ಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು

Update: 2020-02-17 07:24 GMT

ಬೆಂಗಳೂರು, ಫೆ.17: ವಿಧಾನ ಸಭೆಯ ಅಧಿವೇಶನ ಸೋಮವಾರ ಬೆಳಗ್ಗೆ ಆರಂಭಗೊಂಡಿದ್ದು,  ಜಂಟಿ ಸದನವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಜೂಭಾಯ್ ವಾಲಾ ಅವರು ಈ ಬಾರಿ ರಾಜ್ಯದಲ್ಲಿ ನೆರೆಯಿಂದ ಭಾರೀ ಹಾನಿಯಾಗಿತ್ತು. ನೆರೆಯಿಂದ ತೊಂದರೆಗೊಳಗಾದವರಿಗೆ ಕೇಂದ್ರ ಸರಕಾರದ  ನೆರವಿನೊಂದಿಗೆ ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಲಾಗಿದೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ನೆರವು ನೀಡಲಾಗಿದೆ.  

ಬೆಳೆ ಹಾನಿಗೆ ಪ್ರತಿ ಹೆಕ್ಟೇರ್​ಗೆ 10 ಸಾವಿರ ರೂ ಕೃಷಿ ನೆರವು ನೀಡಲಾಗಿದೆ ಎಂದು ರಾಜ್ಯಪಾಲರು ತಿಳಿಸಿದರು.

ಆರು ಲಕ್ಷಕ್ಕೂ ಹೆಚ್ಚು ರೈತರಿಗೆ ಸಬ್ಸಿಡಿ ನೀಡಲಾಗಿದೆ.  ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ, ಸಹಕಾರಿ ಬ್ಯಾಂಕ್​ಗಳಲ್ಲಿ ರೈತರ ಸಾಲ ಮನ್ನಾ, ಕೃಷಿ ಸಾಲ ಮನ್ನಾ, ಮನ್ರೇಗಾ ಯೋಜನೆಯಡಿ  ಕೆಲಸ 100 ದಿನದಿಂದ 150 ದಿನಕ್ಕೆ ವಿಸ್ತರಣೆ,  ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 5 ರೂ ಹೆಚ್ಚಳ,  ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 4,000 ರೂ ಧನಸಹಾಯ ನೀಡುತ್ತಿರುವುದನ್ನು ರಾಜ್ಯಪಾಲರು  ತಮ್ಮ ಭಾಷಣದಲ್ಲಿ ತಿಳಿಸಿದರು.

ಹಾಲು ಉತ್ಪಾದನೆಯಲ್ಲಿ ಕರ್ನಾಟಕ  2ನೇ ಸ್ಥಾನ, ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ ಎಂದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News