ಮಚ್ಚಿನಿಂದ ಹಲ್ಲೆಗೊಳಗಾದ ಕಂದಮ್ಮನ ಪ್ರಾಣ ಉಳಿಸಲು ಶಿವಮೊಗ್ಗದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್

Update: 2020-02-17 10:23 GMT

ಶಿವಮೊಗ್ಗ: ಪತಿ-ಪತ್ನಿ ಜಗಳದಲ್ಲಿ ಪುಟ್ಟ ಕಂದಮ್ಮವೊಂದು ಮಚ್ಚಿನಿಂದ ಹಲ್ಲೆಗೊಳಗಾಗಿ ಮಗು ಕೋಮಾ ಸ್ಥಿತಿಗೆ ತಲುಪಿದೆ. ಮಗುವಿನ ಪ್ರಾಣ ಉಳಿಸಲು ಶಿವಮೊಗ್ಗದಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.

ಹಿರಂನಾಜ್ ಹಲ್ಲೆಗೊಳಗಾದ ಒಂದು ವರ್ಷ ನಾಲ್ಕು ತಿಂಗಳಿನ ಹೆಣ್ಣು ಮಗು. ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ವೇದಾನಗರ ನಿವಾಸಿ ಜೀಷನ್ ಮತ್ತು ಹಾಜರಾ ಬಾನು ದಂಪತಿಯ ಮಗುವಾಗಿದೆ. ಶುಕ್ರವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜೀಷನ್ ಹಾಗೂ ಹಾಜರಾ ಬಾನು ದಂಪತಿ ನಡುವೆ ಜಗಳ ನಡೆದಿದೆ.

ಕುಡಿದ ಅಮಲಿನಲ್ಲಿದ್ದ ಮಗುವಿನ ತಂದೆ ಜೀಷನ್ ಪತ್ನಿ ಹಾಜರಾಬಾನು ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆಗ ಮಚ್ಚಿನ ಏಟು ಮಗುವಿನ ಮೇಲೆ ಬಿದ್ದಿದ್ದು, ಕಂದಮ್ಮ ಗಂಭೀರವಾಗಿ ಗಾಯಗೊಂಡಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣ ಕಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಆರೋಗ್ಯದಲ್ಲಿ ಸುಧಾರಣೆ ಕಂಡು ಬಾರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಝೀರೋ ಟ್ರಾಫಿಕ್ ಮೂಲಕ ಮಗುವನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ರವಾನಿಸಲಾಗಿದೆ.

ಈ ಬಗ್ಗೆ ಕಡೂರು ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News