ಪ್ರವಾದಿ ಅವಹೇಳನ ಆರೋಪ: 'ಮಧುಗಿರಿ ಮೋದಿ' ವಿರುದ್ಧ ನಾಪೋಕ್ಲು ಠಾಣೆಯಲ್ಲಿ ದೂರು

Update: 2020-02-17 17:19 GMT

ಮಡಿಕೇರಿ, ಫೆ.17: ಪ್ರವಾದಿ ಮುಹಮ್ಮದ್ ಸ.ಅ ಹಾಗೂ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಅತುಲ್ ಕುಮಾರ್ (ಮಧುಗಿರಿ ಮೋದಿ) ಎಂಬವರ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾರಿಸ್ ನಾಪೋಕ್ಲು ಅವರು ದೂರು ನೀಡಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅತುಲ್ ಕುಮಾರ್ ಎಂಬುವವರು ಮುಸ್ಲಿಮರ ಭಾವನೆಗೆ ದಕ್ಕೆ ತರುವ ರೀತಿಯಲ್ಲಿ ಪ್ರವಾದಿ ಮುಹಮ್ಮದ್ ಸ.ಅ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಮಾತನಾಡಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಾರಿಸ್ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News