ದೈಹಿಕ ಶಿಕ್ಷಣ ಶಿಕ್ಷಕರಿಂದ ಮಕ್ಕಳಲ್ಲಿ ಶಿಸ್ತಿನ ಜೀವನ: ಡಾ.ವಿಜಯ ಬಲ್ಲಾಳ್

Update: 2020-02-18 12:41 GMT

ಉಡುಪಿ, ಫೆ.18: ದೈಹಿಕ ಶಿಕ್ಷಣ ಶಿಕ್ಷಕರು ಅಂದರೆ ಶಿಸ್ತು. ಮಕ್ಕಳ ಜೀವನ ದಲ್ಲಿ ಶಿಸ್ತು ರೂಪುಗೊಳ್ಳಲು ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ಉಡುಪಿ ವಲಯದ ಆಶ್ರಯದಲ್ಲಿ ಮಂಗಳವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಆಯೋಜಿಸಲಾದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಕ್ರೀಡಾ ಕ್ಷೇತ್ರ ಮಹಾನ್ ಸಾಧನೆ ಮಾಡಲು ಪ್ರೇರೇಪಿಸಬೇಕು. ಶಾಲಾ ಜೀವನದಲ್ಲಿ ಮಕ್ಕಳ ಮತ್ತು ಅದರ ನಂತರ ಜೀವನದಲ್ಲಿ ಯುವಜನತೆ ಸಾಕಷ್ಟು ಒತ್ತಡದಿಂದ ಬಳಲುತ್ತಿರುತ್ತಾರೆ. ಇದರ ನಿವಾರಣೆ ಕ್ರೀಡೆಯಿಂದ ಮಾತ್ರ ಸಾಧ್ಯವಾಗುತ್ತದೆ. ಹಾಗಾಗಿ ಒತ್ತಡ ನಿವಾರಣೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅಪಾರ ವಾದುದು ಎಂದು ಅವರು ಅಭಿಪ್ರಾಯ ಪಟ್ಟರು.

ಅಂತಾರಾಷ್ಟ್ರೀಯ ಹಾಕಿ ಆಟಗಾರ, ಒಲಿಂಪಿಯನ್ ಎಡ್ರಿನ್ ಡಿಸೋಜ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಪ್ರತಿಭೆಗಳಿಗೆ ಪುರಸ್ಕಾರ ನೀಡಲಾಯಿತು. ನಿವೃತ್ತ ಮತ್ತು ಸಾಧಕ ದೈಹಿಕ ಶಿಕ್ಷಣ ಶಿಕ್ಷಕರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ, ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ರಾಜಾರಾಮ್ ಭಟ್, ಜಿಲ್ಲಾ ಅಮೆಚೂರು ಅಥ್ಲೆಟಿಕ್ಸ್ ಅಸೋಸಿಯೇಶನ್ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಹೊಟೇಲ್ ಲಿಗಾಡೋ ಆಡಳಿತ ನಿರ್ದೇಶಕ ಇಬ್ರಾಹಿಂ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ., ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಎಸ್., ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉದ್ಯಮಿ ಶ್ರೀಧರ್ ಶೆಟ್ಟಿ, ಸಮಾಜ ಸೇವಕರಾದ ನಿರು ಪಮಾ ಶೆಟ್ಟಿ, ಸ.ಜಿತೇಂದ್ರ ಭಾಗವಹಿಸಿದ್ದರು.

ಪರಿವೀಕ್ಷಣಾಧಿಕಾರಿಗಳಾದ ಭುಜಂಗ ಶೆಟ್ಟಿ, ವಿಶ್ವನಾಥ ಬಾಯರಿ, ಚಂದ್ರ ಶೇಖರ್ ಶೆಟ್ಟಿ, ಸಂಘದ ಅಧ್ಯಕ್ಷೆ ಜ್ಯೋತಿ, ಉಡುಪಿ ವಲಯ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಕಾರ್ಯದರ್ಶಿ ರವೀಂದ್ರ ನಾಯ್ಕಾ, ಖಜಾಂಚಿ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ನಾಯಕ್ ಸ್ವಾಗತಿಸಿದರು. ಶ್ರೀಕಾಂತ್ ಸಾಮಂತ್ ಮತ್ತು ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News