ಕಿನ್ಯ: ಕೂಟು ಝಿಯಾರತ್‍ಗೆ ಚಾಲನೆ

Update: 2020-02-18 14:00 GMT

ಉಳ್ಳಾಲ:  ಧಾರ್ಮಿಕ ಕಾರ್ಯಕ್ರಮಗಳು ಜನರ ಬೆಳವಣಿಗೆಗೆ ಪೂರಕ ಆಗಿರಬೇಕು ಎಂದು ಸಯ್ಯದ್ ಮುಕ್ತಾರ್ ತಂಙಳ್ ಕುಂಬೋಳ್  ಹೇಳಿದರು.

ಅವರು ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ಕಿನ್ಯ ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಯುವ ಕೂಟು ಝಿಯಾರತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಿನ್ಯ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಯ್ಯದ್ ಅಮೀರ್ ತಂಙಳ್ ದುವಾ ನೆರವೇರಿಸಿದರು. ಅಬ್ದುಲ್ ಖಾದರ್ ಅಲ್ ಕಾಸಿಮಿ ಬಂಬ್ರಾಣ ಉಪದೇಶ ನೀಡಿದರು.

ಈ ಸಂದರ್ಭ ಕಿನ್ಯ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾದ ಮಹತ್ತರ ಸೇವೆ ನೀಡಿದ ಹಿರಿಯರಾದ ಸಾಧು ಕುಂಞಿ ಮಾಸ್ಟರ್ ಮತ್ತು ಹುಸೈನ್ ಕುಂಞಿ ಹಾಜಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಿನ್ಯ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಪತ್ತಾಹ್ ಫೈಝಿ, ಫಾರೂಕ್ ದಾರಿಮಿ, ಕಿನ್ಯ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ಹುಸೈನ್ ಕುಂಞಿ ಹಾಜಿ, ಸಾಧುಕುಂಞಿ ಮಾಸ್ಟರ್, ಉಪಾಧ್ಯಕ್ಷರಾದ ಅಶ್ರಫ್ ಮಾರಾಠಿ ಮೂಲೆ, ಇಬ್ರಾಹಿಂ, ಕುಂಞಿ ಹಾಜಿ, ಕಾರ್ಯದರ್ಶಿ ಇಸ್ಮಾಯಿಲ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಹಮೀದ್ ಕಿನ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News