ಕಾರು ಢಿಕ್ಕಿ: ಬೈಕ್ ಸವಾರ ಟೆಕ್ಕಿ ಮೃತ್ಯು

Update: 2020-02-18 14:40 GMT

ಬೆಂಗಳೂರು, ಫೆ.18: ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೇವನಹಳ್ಳಿ ನಿವಾಸಿ ಹರೀಶ್ ಬಾಬು(32) ಮೃತರು ಎಂದು ಗುರುತಿಸಲಾಗಿದೆ.

ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಹರೀಶ್ ಬಾಬು, ಮಂಗಳವಾರ ಬೆಳಗ್ಗೆ 9:30ರ ವೇಳೆ ಹುಣಸೇಮಾರನಹಳ್ಳಿಯ ಮಹೇಂದ್ರ ಮಳಿಗೆ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು ಪರಾರಿಯಾಗಿರುವ ಕಾರಿನ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News