ವಿ.ಎಸ್.ಆಚಾರ್ಯ ಸ್ಮರಣಾರ್ಥ ಮೀನುಗಾರಿಕಾ ತರಬೇತಿ ಕೇಂದ್ರ ಸ್ಥಾಪನೆ ಅನುದಾನಕ್ಕೆ ಮನವಿ

Update: 2020-02-18 15:43 GMT

ಉಡುಪಿ, ಫೆ.18: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ರಾಜ್ಯ ಸರಕಾರದ ಜಂಟಿ ಆಶ್ರಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆಧುನಿಕ ಮತ್ತು ಮೂಲಭೂತ ಸೌಕರ್ಯ ಗಳನ್ನೊಳಗೊಂಡ ಡಾ.ವಿ.ಎಸ್.ಆಚಾರ್ಯ ಸ್ಮರಣಾರ್ಥ ಬಹುಮಹಡಿ ತರಬೇತಿ ಕೇಂದ್ರಕ್ಕೆ ಮುಂಬರುವ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ರಘುಪತಿ ಭಟ್ ಅವರಿಗೆ ಫೆಡರೇಶನ್ ಮನವಿ ಸಲ್ಲಿಸಿದೆ.

ಮಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ತರಬೇತಿ ಕೇಂದ್ರವನ್ನು ಸ್ಥಾಪಿಸಲು ಫೆಡರೇಷನ್ ಆಡಳಿತ ಮಂಡಳಿ ಸಭೆ ಮತ್ತು ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಕರಾವಳಿ ಭಾಗದ ಮೀನುಗಾರರ ಅಭಿವೃದ್ದಿಗೆ ಬಹು ದೊಡ್ಡ ಕೊಡುಗೆ ನೀಡಿರುವ ದಿವಂಗತ ವಿ.ಎಸ್.ಆಚಾರ್ಯರ ಗೌರವಾರ್ಥ ವಾಗಿ ಈ ತರಬೇತಿ ಕೇಂದ್ರಕ್ಕೆ ಅವರ ಹೆಸರಿಡಲು ನಿರ್ಧರಿಸಲಾಗಿದೆ. ವೈಜ್ಞಾನಿಕ ರೀತಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ಅಗತ್ಯವಾಗಿರುವ ಈ ತರಬೇತಿ ಕೇಂದ್ರಕ್ಕೆ ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಮೀನುಗಾರರ ಪರವಾಗಿ ಮನವಿ ಸಲ್ಲಿಸಿರುವುದಾಗಿ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವಣರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News