ಅಕ್ರಮ ಸಾಗಾಟದ ಜಾನುವಾರು ವಶ

Update: 2020-02-18 15:54 GMT

ಕಾರ್ಕಳ, ಫೆ.18: ಜೈಲೋ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಜಾನುವಾರುಗಳನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಫೆ.18ರಂದು ಬೆಳಗಿನ ಜಾವ 5.45ರ ಸುಮಾರಿಗೆ ಮುಡಾರು ಗ್ರಾಮದ ಪಾಜಿನಡ್ಕ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸ್ ದಾಳಿ ವೇಳೆ ಕಾರಿನ ಚಾಲಕ ಹಾಗೂ ಇನ್ನೋರ್ವ ಹಾಡಿಯಲ್ಲಿ ಓಡಿ ಪರಾರಿಯಾಗಿದ್ದು ಮೂರು ಜಾನುವಾರುಗಳನ್ನು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News