ಫೆ.20, 21 ರಂದು ಕೆಎಸ್‌ಆರ್‌ಟಿಸಿಯಿಂದ 300 ಹೆಚ್ಚುವರಿ ಬಸ್

Update: 2020-02-18 16:56 GMT

ಬೆಂಗಳೂರು ಫೆ.18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಫೆ.20 ಹಾಗೂ 21ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 300 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.

ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 696 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ಹಾಗೂ ಹೋಗುವ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದವರಿಗೆ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News