ಗೋಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ; ಪ್ರಯಾಣ ವಿಳಂಬ

Update: 2020-02-18 16:58 GMT
ಫೈಲ್ ಫೋಟೊ

ಹೊಸದಿಲ್ಲಿ, ಫೆ.18: ಅಹ್ಮದಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಗೋಏರ್ ವಿಮಾನ ಟೇಕ್‌ಆಫ್ ಆಗುವ ಸಮಯದಲ್ಲಿ ವಿಮಾನದ ಇಂಜಿನ್‌ಗೆ ಹಕ್ಕಿ ಬಡಿದು ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ವರದಿಯಾಗಿದೆ. ತಕ್ಷಣ ವಿಮಾನನಿಲ್ದಾಣದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಹಾಗೂ ಸಿಬಂದಿಗಳು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಳಿಕ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಮತ್ತೊಂದು ವಿಮಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹ್ಮದಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುವ ಗೋಏರ್‌ನ ಜಿ8 802 ವಿಮಾನದ ಇಂಜಿನ್‌ಗೆ ಹಕ್ಕಿ ಬಡಿದ ಕಾರಣ ಬಲಬದಿಯ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನದ ಸಿಬಂದಿಗಳ ಸಕಾಲಿಕ ಕ್ರಮದಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಪ್ರಯಾಣಿಕರನ್ನು ಮತ್ತೊಂದು ವಿಮಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಗೋಏರ್ ಸಂಸ್ಥೆಯ ವಕ್ತಾರರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News