ಟ್ವೆಂಟಿ-20 ಮಹಿಳಾ ವಿಶ್ವಕಪ್ ಗೆಲ್ಲಲು ಪ್ರಯತ್ನ: ಹರ್ಮನ್‌ಪ್ರೀತ್

Update: 2020-02-19 04:57 GMT

ಮೆಲ್ಬೊರ್ನ್,ಫೆ.17: ಭಾರತ ತನ್ನ ಟ್ವೆಂಟಿ-20ಮಹಿಳಾ ವಿಶ್ವಕಪ್ ಅಭಿಯಾನವನ್ನು ಫೆಬ್ರವರಿ 21ರಂದು ನಡೆಯಲಿರುವ ಟೂರ್ನಮೆಂಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯ ತಂಡವನ್ನು ಎದುರಿಸುವ ಮೂಲಕ ಆರಂಭಿಸಲಿದೆ.

   2017ರಲ್ಲಿ ವಿಶ್ವಕಪ್ ಪ್ರಶಸ್ತಿಯನ್ನು ಕಳೆದುಕೊಂಡಿರುವ ಹಿನ್ನಲೆಯಲ್ಲಿ ನಿರಾಶೆಯಾಗಿಲ್ಲ. ಫೆಬ್ರವರಿ 21ರಿಂದ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟ್ವೆಂಟಿ- 20 ವಿಶ್ವಕಪ್‌ಗೆಲ್ಲುವ ನಿಟ್ಟಿನಲ್ಲಿ ಮತ್ತೊಮ್ಮೆ ಪ್ರಯತ್ನ ನಡೆಸುವುದಾಗಿ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹೇಳಿದ್ದಾರೆ.

   ಭಾರತ 2017ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲುವ ಸನಿಹಕ್ಕೆ ಬಂದಿತ್ತು. ಆದರೆ ಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಒಂಬತ್ತು ರನ್‌ಗಳಿಂದ ಸೋಲು ಅನುಭವಿಸಿತ್ತು. ಕಳೆದ ಮೂರು ವರ್ಷಗಳಲ್ಲಿ ಗಳಿಸಿದ ಅನುಭವ ತಂಡಕ್ಕೆ ನೆರವಾಗಲಿದೆ ಎಂದು ಹರ್ಮನ್‌ಪ್ರೀತ್ ಹೇಳಿದರು. ನಮ್ಮ ತಂಡವು ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ, ಎಲ್ಲರೂ ಆತ್ಮವಿಶ್ವಾಸದಿಂದ ಇದ್ದಾರೆೆ ಎಂದು ಹರ್ಮನ್‌ಪ್ರೀತ್ ಸೋಮವಾರ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News