ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಟ್ರಂಪ್

Update: 2020-02-19 04:58 GMT

ವಾಷಿಂಗ್ಟನ್, ಫೆ.19: ನಾನು ಭಾರತದೊಂದಿಗೆ ದೊಡ್ಡ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ, ಇದು ನವೆಂಬರ್‌ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಗಿಂತ ಮೊದಲು ನಡೆಯುವುದೋ ಎಂದು ನನಗೆ ಗೊತ್ತಿಲ್ಲ ಎಂದು ಹೇಳಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ದಿಲ್ಲಿ ಭೇಟಿಯ ವೇಳೆ ಪ್ರಮುಖ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಏರ್ಪಡುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

‘‘ನಾವು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಆದರೆ, ನಾನು ಈ ಒಪ್ಪಂದವನ್ನು ಬಳಿಕ ಮಾಡಿಕೊಳ್ಳುತ್ತೇನೆ’’ ಎಂದು ಸುದ್ದಿಗಾರರಿಗೆ ಟ್ರಂಪ್ ತಿಳಿಸಿದರು.

ಅಮೆರಿಕ ಅಧ್ಯಕ್ಷ ಟ್ರಂಪ್ ಫೆ.24 ಹಾಗೂ 25ರಂದು ಎರಡು ದಿನ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಭಾರತಕ್ಕೆ ಭೇಟಿ ನೀಡುವ ಮೊದಲೇ ಆ ದೇಶದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಟ್ರಂಪ್,‘‘ನಾವು ಭಾರತದೊಂದಿಗೆ ದೊಡ್ಡ ಒಪ್ಪಂದಕ್ಕೆ ಸಹಿ ಹಾಕುತ್ತೇವೆ. ಆದರೆ,ಇದು ಚುನಾವಣೆಗಿಂತ ಮೊದಲು ನಡೆಯಲಿದೆಯೇ ಎಂದು ನನಗೆ ಗೊತ್ತಿಲ್ಲ. ಅಮೆರಿಕ-ಭಾರತ ವ್ಯಾಪಾರ ಒಪ್ಪಂದದಲ್ಲಿ ಭಾರತ ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News