ಸಿಎಎ ವಿರುದ್ಧ ನಿರ್ಣಯಕ್ಕೆ ಆಗ್ರಹಿಸಿ ಚೆನ್ನೈನಲ್ಲಿ ಬೃಹತ್ ಮೆರವಣಿಗೆ

Update: 2020-02-19 07:35 GMT

 ಚೆನ್ನೈ, ಫೆ.19: ಪೌರತ್ವ(ತಿದ್ದುಪಡಿ)ಕಾಯ್ದೆ (ಸಿಎಎ)ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಬೇಕೆಂದು ಆಗ್ರಹಿಸಿ ಸಾವಿರಾರು ಪ್ರತಿಭಟನಕಾರರು ಚೆನ್ನೈನ ಫೋರ್ಟ್ ಸೈಂಟ್ ಜಾರ್ಜ್‌ನಲ್ಲಿರುವ ಸೆಕ್ರಟರಿಯಟ್‌ನತ್ತ ಮೆರವಣಿಗೆ ನಡೆಸಿದರು. ಬೆಳಗ್ಗೆ 10 ಗಂಟೆಗೆ ಕಲೈವನಾರ್ ಅರಾಂಗಮ್‌ನಲ್ಲಿ ರ್ಯಾಲಿ ಆರಂಭವಾಗಿತ್ತು.

ಮದ್ರಾಸ್ ಹೈಕೋರ್ಟ್ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನೀಡಿದ್ದ ಮಧ್ಯಂತರ ಆದೇಶದಲ್ಲಿ ಪ್ರತಿಭಟನಾ ರ್ಯಾಲಿಗೆ ಅನುಮತಿ ನೀಡಿರಲಿಲ್ಲ. ಹೈಕೋರ್ಟ್ ಆದೇಶದ ಹೊರತಾಗಿಯೂ ರ್ಯಾಲಿ ನಡೆದಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಎ.ಕೆ.ವಿಶ್ವನಾಥನ್ ದೃಢಪಡಿಸಿದರು.

ಪ್ರಮುಖ ವಿಪಕ್ಷವಾದ ಡಿಎಂಕೆ ಈ ಮೊದಲು ಸದನದಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಲು ಮುಂದಾಗಿತ್ತು. ಆದರೆ, ಸ್ಪೀಕರ್ ಪಿ. ಧನಪಾಲ್ ಇದಕ್ಕೆ ಅವಕಾಶ ನೀಡಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News